ಸೋಮವಾರದಿಂದ ಕೇರಳದಲ್ಲಿ ಕುಂಭದ್ರೋಣ ಮಳೆ ನಿರೀಕ್ಷೆ-ಹವಾಮಾನ ಇಲಾಖೆ ಮುನ್ಸೂಚನೆ
0samarasasudhiಆಗಸ್ಟ್ 01, 2020
ತಿರುವನಂತಪುರ: ಕೇರಳದಲ್ಲಿ ಸೋಮವಾರದಿಂದ ಭಾರಿ ಮಳೆಯಾಗುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೋಮವಾರ ಮತ್ತು ಮಂಗಳವಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆಯನ್ನು ಘೋಷಿಸಲಾಗಿದೆ.
ಆಗಸ್ಟ್ 4 ರ ಹೊತ್ತಿಗೆ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಉಂಟಾಗುತ್ತದೆ. ಸೋಮವಾರ ಮತ್ತು ಮಂಗಳವಾರ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ನಂತರ ಭಾರಿ ಮಳೆಯಾಗುವ ನಿರೀಕ್ಷೆಯಿದೆ.