ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಪರೀಕ್ಷೆ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ತಮ್ಮ ಸಂಪರ್ಕಕ್ಕೆ ಬಂದವರು ಕೂಡ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಮಿತ್ ಶಾ ಅವರು ಹೇಳಿದ್ದಾರೆ.