ಕಾಸರಗೋಡು: ಕೃಷಿಕ ದಿನಾಚರಣೆ ಆ.17ರಂದು ಆಚರಣೆಗೊಳ್ಳಲಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಇದಕ್ಕಿರುವ ಸಿದ್ಧತೆ ಪೂರ್ಣಗೊಂಡಿದೆ ಎಂದು ಪ್ರಧಾನ ಕೃಷಿ ಅಧಿಕಾರಿ ಎ.ಟಿ.ಪ್ರಸಾದ್ ಮ್ಯಾಥ್ಯೂ ತಿಳಿಸಿರುವರು.
ಅಂದು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ನಡೆದ ವೀಡಿಯೋ ಕಾನ್ ಫೆರೆನ್ಸ್ ಮೂಲಕ ನಡೆಯಲಿರುವ ಜಿಲ್ಲಾ ಮಟ್ಟದ ಕೃಷಿಕ ದಿನಾಚರಣೆಯನ್ನು ಕಂದಾಯ ಸಚಿವ ಇ.ಚಂದ್ರಶೇಖರನ್ ಉದ್ಘಾಟಿಸುವರು. ಪರಪ್ಪ, ಕಾಞಂಗಾಡ್ ಬ್ಲೋಕ್ ಪಂಚಾಯತ್ ಮಟ್ಟದ ಕೃಷಿ ವಿಜ್ಞಾನ ಕೇಂದ್ರಗಳ ಉದ್ಘಾಟನೆಯನ್ನು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ನೆರವೇರಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಜಿಲ್ಲಾ ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮೊದಲಾದವರು ಉಪಸ್ಥಿತರಿರುವರು.