ಕೊಚ್ಚಿ: ರಾಜ್ಯದಲ್ಲಿ ಹವಾಮಾನ್ ವೈಪರೀತ್ಯದಿಂದ ಭಾರೀ ಮಳೆಯ ಇನ್ನಷ್ಟು ವ್ಯಾಪಕಗೊಳ್ಳಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಶನಿವಾರ ಮತ್ತು ಇಂದು(ಭಾನುವಾರ) ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಿದೆ. ಶನಿವಾರ ಮಧ್ಯಾಹ್ನ 1 ಗಂಟೆಗೆ ಬಿಡುಗಡೆಯಾದ ವರದಿಯ ಪ್ರಕಾರ ಶನಿವಾರ ಐದು ಜಿಲ್ಲೆಗಳಲ್ಲಿ ಮತ್ತು ಭಾನುವಾರ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನೀಡಲಾಗಿದೆ.
ಇಡುಕ್ಕಿ, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸೂಚನೆ ನೀಡಿದೆ. ಜೊತೆಗೆ ಭಾನುವಾರ ಇಡುಕ್ಕಿ, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ 204.4 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇಡುಕ್ಕಿ, ವಯನಾಡ್ ಮತ್ತು ಇತರ ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಭೂಕುಸಿತದ ನಡುವೆ ಹೊಸ ಮುನ್ಸೂಚನೆ ಹೊರಬಿದ್ದಿರುವುದು ಕಳವಳಕ್ಕೂ ಕಾರಣವಾಗಿದೆ.
ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಸ್ಥಿತಿ ಉಂಟಾಗಲಿದ್ದು ಸನ್ನದ್ದರಾಗಿರಬೇಕು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್‍ಡಿಎಂಎ) ಸಾರ್ವಜನಿಕ ಮತ್ತು ಸರ್ಕಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ವಯನಾಡ್ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ರಾತ್ರಿಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಮತ್ತು ಮಣ್ಣು ಕುಸಿತಕ್ಕೆ ಗುರಿಯಾಗುವ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಬೇಕಾಗುತ್ತದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಎಂಎ) ಹೇಳಿದೆ.
ತಿರುವನಂತಪುರ, ಕೊಲ್ಲಂ ಮತ್ತು ರೆಡ್ ಅಲರ್ಟ್ ಜಿಲ್ಲೆಗಳನ್ನು ಹೊರತುಪಡಿಸಿ ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ. ಭಾನುವಾರ ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಎಚ್ಚರಿಕೆ ನೀಡಲಾಗಿದೆ.