ಕಾಸರಗೋಡು: ಮಂಜೇಶ್ವರ ಬ್ಲಾಕ್ ಪಂಚಾಯತ್ ವ್ಯಾಪ್ತಿಯಲ್ಲಿ 8 ರಿಂದ 12ನೇ ತರಗತಿಯಲ್ಲಿ ಕಲಿಕೆ ನಡೆಸುತ್ತಿರುವ ಪರಿಶಿಷ್ಟ ಜಾತಿ ಜನಾಂಗಕ್ಕೆ ಸೇರಿರುವ ವಿದ್ಯಾರ್ಥಿಗಳಿಗೆ ಕಲಿಕಾ ಕೊಠಡಿ ನಿರ್ಮಾಣ ಆರ್ಥಿಕ ಸಹಾಯಕ್ಕೆ ಅರ್ಜಿ ಸಲ್ಲಿಸಬಹುದು. ಕೌಂಟುಂಬಿಕ ವಾರ್ಷಿಕ ಆದಾಯ ಒಂದು ಲಕ್ಷ ರೂ. ಮೀರದೇ ಇರುವ, ಸರ್ಕಾರಿ, ಅನುದಾನಿತ, ವಿಶೇಷ, ತಾಂತ್ರಿಕ ಶಾಲೆಗಳಲ್ಲಿ ಕಲಿಕೆ ನಡೆಸುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದಾರೆ. ಹೆಚ್ಚುವರಿ ಮಾಹಿತಿಗಾಗಿ ಮಂಜೇಶ್ವರ ಬ್ಲಾಕ್ ಪರಿಶಿಷ್ಟ ಜಾತಿ ಅಭಿವೃದ್ಧಿ ಕಚೇರಿ(ದೂರವಾಣಿ ನಂಬ್ರ: 8547630171)ಯನ್ನು ಸಂಪರ್ಕಿಸಬಹುದು.