84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಬಳಿಕ ಅವರ ಆರೋಗ್ಯ ಹದಗೆಟ್ಟಿತ್ತು. ಕೊರೊನಾವೈರಸ್ ಸೋಂಕಿನಿಂದಲೂ ಬಳಲುತ್ತಿದ್ದರು. ಬಂಗಾಳದಲ್ಲಿ 1935, ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆ ಅಲಂಕರಿಸಿದ್ದರು.