ನವದೆಹಲಿ: ಕಾಲಪಾನಿ ಗಡಿ ವಿವಾದದ ಬಳಿಕ ಇದೀಗ ಮೊದಲ ಬಾರಿಗೆ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.
74ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಕೆ.ಪಿ.ಶರ್ಮಾ ಒಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ 11 ನಿಮಿಷಗಳ ಕಾಲ ಸಂವಾದ ನಡೆಸಿದ್ದಾರೆ.
ಭಾರತೀಯರು ಮತ್ತು ಕೇಂದ್ರ ಸರ್ಕಾರಕ್ಕೆ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ತಿಳಿಸಿದರು. ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸದಸ್ಯರಾಗಿ ಭಾರತ ಆಯ್ಕೆ ಆಗಿರುವುದಕ್ಕೆ ಅಭಿನಂದಿಸಿದರು.
ಉಭಯ ದೇಶಗಳಲ್ಲಿ ಕೋವಿಡ್ -19 ಸಾಂಕ್ರಾಮಿಕದ ಪರಿಣಾಮವನ್ನು ಕಡಿಮೆ ಮಾಡಲು ಪ್ರಯತ್ನಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಯಕರು ಪರಸ್ಪರ ಒಗ್ಗಟ್ಟನ್ನು ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಪ್ರಧಾನ ಮೋದಿ ನೇಪಾಳಕ್ಕೆ ಭಾರತದ ನಿರಂತರ ಬೆಂಬಲವನ್ನು ನೀಡುವ ಭರವಸೆ ನೀಡಿದೆ ಎಂದು ವಿದೇಶಾಂಗ ಸಚಿವಾಲಯ(ಎಂಇಎ) ಪ್ರಕಟಣೆಯಲ್ಲಿ ತಿಳಿಸಿದೆ.
Congratulations and greetings to Prime Minister Shri @narendramodi ji, the Government and people of India on the happy occasion of the 74th Independence Day. Best wishes for more progress and prosperity of the people of India.