ಚಿಕ್ಕಮಗಳೂರು :ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ರಾಷ್ಟೀಯ ಹೆದ್ದಾರಿ-73 (ಹಳೆ ರಾ. ಹೆದ್ದಾರಿ234) ಮಂಗಳೂರು ತುಮಕೂರು ರಸ್ತೆಯ 86.200 ಕಿ.ಮೀ (ಚಿಕ್ಕಮಗಳೂರು ಜಿಲ್ಲಾ ಗಡಿ) ಯಿಂದ 99.200 ಕಿ. ಮೀ(ಕೊಟ್ಟಿಗೆಹಾರ) ವರೆಗೆ ಚಾರ್ಮುಡಿ ಘಾಟ್ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಿರುವುದನ್ನು ತೆರವುಗೊಳಿಸಲಾಗಿದೆ.
ಈ ಹಿಂದಿನಂತೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಆದೇಶಿಸಿದ್ದಾರೆ.