ಉಡುಪಿ : ಕೊರೋನಾ ಸೋಂಕಿನಿಂದಾಗಿ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು, ಇಂದು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ. ಈ ಬಳಿಕ ಪುತ್ತಿಗೆ ಮಠಕ್ಕೆ ತೆರಳಿದ್ದಾರೆ.
ಕಳೆದ ಜುಲೈ 21ರಂದು ಬೆಂಗಳೂರಿಗೆ ತೆರಳಿ ಬಂದ ನಂತ್ರ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳಿಗೆ ಕೊರೋನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಟ್ಟಿದ್ದರು. ಇಂತಹ ಲ್ಯಾಬ್ ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು.
ಈ ಕಾರಣದಿಂದಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ, ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದರು. ಕೊರೋನಾ ಚಿಕಿತ್ಸೆಯ ಬಳಿಕ ಗುಣಮುಖರಾದಂತ ಅವರನ್ನು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೇ ಪುತ್ತಿಗೆ ಮಠಕ್ಕೆ ತೆರಳಿ, ಎಂದಿನಂತೆ ಪೂಜಾ ವಿಧಿಯಲ್ಲಿ ತೊಗಿದ್ದಾರೆ.