ನವದೆಹಲಿ : ಅಂತರರಾಷ್ಟ್ರೀಯ ಪ್ರಯಾಣಿಕರು ಭಾರತಕ್ಕೆ ಆಗಮಿಸಿದ ವೇಳೆ RT -PCR ಪರೀಕ್ಷೆಯ ನೆಗೇಟಿವ್ ವರದಿಯನ್ನು ಆರೋಗ್ಯ ಇಲಾಖೆಗೆ ನೀಡಿದರೆ ಅಂತಹ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗುತ್ತದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇತ್ತೀಚೆಗೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಈ ಕುರಿತಾಗಿ ತಿಳಿಸಿದೆ.
ಪ್ರಯಾಣ ಆರಂಭಿಸುವ 96 ಗಂಟೆಗಳ ಒಳಗೆ ಈ ಪರೀಕ್ಷೆಯನ್ನು ನಡೆಸಬೇಕಾಗಿದ್ದು, ಈ ಪರೀಕ್ಷೆ ಮಾಡದವರು 14 ದಿನಗಳವರೆಗೆ ಕಡ್ಡಾಯವಾಗಿ ಕ್ವಾರಂಟೈನ್ ಗೆ ಒಳಗಾಗಬೇಕಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಪ್ರಯಾಣಿಕರು ಆರ್ ಟಿ -ಪಿಸಿಆರ್ ಪರೀಕ್ಷೆಯ ನೆಗೇಟಿವ್ ವರದಿಯನ್ನು ಆರೋಗ್ಯ ಇಲಾಖೆಗೆ ನೀಡಿದರೆ ಅಂತಹ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗುತ್ತದೆ ಎಂದು ಮಾರ್ಗಸೂಚಿ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು, ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ.