ಬೆಂಗಳೂರು: ಮಹಾಮಾರಿ ಕರೊನಾ ವೈರಸ್ ಔಷಧ ಸಂಬಂಧ ಆಯುರ್ವೇದ ತಜ್ಞ ಡಾ. ಗಿರಿಧರ ಕಜೆ ಅವರಿಗೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್ಐ) ನೋಟಿಸ್ ನೀಡಿದೆ.
ಕೋವಿಡ್ ರೋಗಕ್ಕೆ ಆಯುರ್ವೇದ ಔಷಧ ಬಳಕೆ ಕುರಿತು ಅನಗತ್ಯ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಆಯುರ್ವೇದ ಔಷಧ ಇನ್ನು ಕ್ಲಿನಿಕಲ್ ಟ್ರಯಲ್?ನ ಪ್ರಾಥಮಿಕ ಹಂತದಲ್ಲಿದೆ. ಆದರೆ, ಕ್ಲಿನಿಕಲ್ ಟ್ರಯಲ್ ಯಶಸ್ವಿಯಾಗಿದೆ ಎಂದು ಹೇಳಿಕೆ ನೀಡಿರುವುದಕ್ಕೆ ಬಿಎಂಸಿಆರ್?ಐ ಆಕ್ಷೇಪ ವ್ಯಕ್ತಪಡಿಸಿದೆ.
ಇದೊಂದು ಸೂಕ್ಷ್ಮ ಸಂದರ್ಭ. ಇಂತಹ ಸೂಕ್ಷ್ಮ ವಿಚಾರಗಳನ್ನು ಬಹಿರಂಗಪಡಿಸುವ ಮುನ್ನ ಸೂಕ್ತ ಆಡಳಿತ ಮಂಡಳಿಯಿಂದ ಅನುಮತಿ ಪಡೆದಿರಬೇಕೆಂಬುದು ನಿಮಗೆ ತಿಳಿದಿದೆ. ಇಂತಹ ಸಂದರ್ಭದಲ್ಲೂ ನೀವು ಬೇಜವಾಬ್ದಾರಿಯಿಂದ ವರ್ತಿಸಿದ್ದೀರಿ ಎಂದಿರುವ ಬಿಎಂಆರ್?ಸಿಐ, ಈ ಕುರಿತು ತಕ್ಷಣ ಸ್ಪಷ್ಟೀಕರಣ ನೀಡಲು ಕೇಳಿದೆ. ಇಲ್ಲವಾದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಬಿಎಂಆರ್?ಸಿಐ ಕಜೆ ಅವರನ್ನು ಎಚ್ಚರಿಸಿದೆ.
ಜೊತೆಗೆ ಕಜೆ ಅವರು ಕೇಂದ್ರ ಸರ್ಕಾರದ ಮಾರ್ಗಸೂಚಿಗೆ ಅನುಗುಣವಾಗಿ ವಿಕ್ಟೊರಿಯಾ ಆಸ್ಪತ್ರೆಗೆ ದಾಖಲಾಗಿದ್ದ 10 ಸೊ?ಂಕಿತರ ಮೇಲೆ ಪ್ರಯೊ?ಗ ನಡೆಸಿದ್ದರು. ಕೇವಲ 9 ದಿನದಲ್ಲಿ ಎಲ್ಲರೂ ಗುಣಮುಖರಾಗಿ ನೆಗೆಟಿವ್ ವರದಿಯೊಂದಿಗೆ ಮನೆಗೆ ತೆರಳಿದ್ದರು ಎಂದು ಈ ಹಿಂದೆ ವರದಿಯಾಗಿತ್ತು. ಕಜೆ ನೇತೃತ್ವದಲ್ಲಿ ನಡೆದ ಈ ಯಶಸ್ಸಿನ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮುಂದಿನ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿತ್ತು.