ನವದೆಹಲಿ: ಹೆತ್ತ ಮಕ್ಕಳಿಂದಲೇ ಅರೆನಗ್ನ ದೇಹದ ಮೇಲೆ ಪೇಟಿಂಗ್ ಮಾಡಿಸಿಕೊಂಡಿದ್ದ ಕೇರಳದ ವಿವಾದಿತ ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತೀಮಾಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಈ ಪೇಟಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ತೀವ್ರ ಟೀಕೆಗೆ ಗುರಿಯಾಗಿತ್ತು. ನಂತರ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು ಫಾತಿಮಾಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿತ್ತು.
ಕೇರಳ ಹೈಕೋರ್ಟ್ ಆದೇಶ ಪ್ರಶ್ನಿಸಿ ಫಾತಿಮಾ ಸುಪ್ರೀಂಕೋರ್ಟ್ ಗೆ ನಿರೀಕ್ಷಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾ. ಅರುಣ್ ಮಿಶ್ರಾ ನೇತೃತ್ವದ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು ಅಲ್ಲದೇ ಅರ್ಜಿದಾರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಓರ್ವ ಸಾಮಾಜಿಕ ಕಾರ್ಯಕರ್ತೆಯಾಗಿ ಹೀಗೆ ಮಾಡುವುದು ಸರಿನಾ? ಇದರಿಂದ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುವುದಿಲ್ಲವೇ ಎಂದ ಪ್ರಶ್ನಿಸಿದೆ.
ಅರ್ಜಿದಾರರ ಪರ ವಕೀಲರು ನಮ್ಮ ಕಕ್ಷಿದಾರರ ಬಂಧನವಾದರೆ ಜೀವನ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ವಾದಿಸಿದ್ದರು.