HEALTH TIPS

10 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.75 ರಷ್ಟು ಹೊಸ ಕೋವಿಡ್ -19 ಪ್ರಕರಣ: ಕೇಂದ್ರ

      ನವದೆಹಲಿ: ದೇಶದಲ್ಲಿ ಒಂದು ದಿನದಲ್ಲಿ ವರದಿಯಾದ 85,362 ಹೊಸ ಕೊರೋನಾ ವೈರಸ್ ಪ್ರಕರಣಗಳಲ್ಲಿ ಶೇ. 75. ರಷ್ಟು ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

      ಕೊರೋನಾ ವೈರಸ್ ಸೋಂಕನ್ನು ಪತ್ತೆ ಹಚ್ಚಲು ಭಾರತ ಒಟ್ಟು ಏಳು ಕೋಟಿ ಕೋವಿಡ್-19 ಪರೀಕ್ಷೆಗಳನ್ನು ನಡೆಸಿದೆ ಮತ್ತು ದೇಶದಲ್ಲಿ ಪರೀಕ್ಷಾ ಸಾಮರ್ಥ್ಯವು ದಿನಕ್ಕೆ 14 ಲಕ್ಷ ದಾಟಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

     ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ಒಡಿಶಾ, ದೆಹಲಿ, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ಶೇ.75 ರಷ್ಟು ಪ್ರಕರಣಗಳು ವರದಿಯಾಗಿವೆ.

    ಇಂದು ಮಹಾರಾಷ್ಟ್ರದಲ್ಲಿ 17,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಕೋವಿಡ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

     ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಕ್ರಮವಾಗಿ 8,000 ಮತ್ತು 7,000 ಪ್ರಕರಣಗಳು ವರದಿಯಾಗಿವೆ ಎಂದು ಸಚಿವಾಲಯ ತಿಳಿಸಿದೆ.

     ಅಲ್ಲದೆ, ಮಹಾರಾಷ್ಟ್ರ, ಪಂಜಾಬ್, ಉತ್ತರ ಪ್ರದೇಶ, ತಮಿಳುನಾಡು, ಕರ್ನಾಟಕ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ಮಧ್ಯಪ್ರದೇಶ, ದೆಹಲಿ ಮತ್ತು ಛತ್ತೀಸ್‌ಗಢದಲ್ಲಿ ಒಂದು ದಿನದಲ್ಲಿ ಶೇ. 83 ರಷ್ಟು ಸಾವು ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries