ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದರೂ ಕೇಂದ್ರ ಸರ್ಕಾರ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸುತ್ತಿದ್ದು, ಸೆಪ್ಟೆಂಬರ್ 12ರಿಂದ ಮತ್ತೆ 80 ವಿಶೇಷ ರೈಲುಗಳು ಸಂಚರಿಸಲಿವೆ.
ಸೆಪ್ಟೆಂಬರ್ 12ರಿಂದ 40 ಜೋಡಿ ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದ್ದು, ಸೆಪ್ಟೆಂಬರ್ 10ರಿಂದ ಬುಕಿಂಗ್ ಆರಂಭವಾಗಲಿದೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ಅವರು ತಿಳಿಸಿದ್ದಾರೆ.
ದೇಶದಲ್ಲಿ ಈಗಾಗಲೇ 230 ರೈಲುಗಳು ಸಂಚರಿಸುತ್ತಿದ್ದು, ಈಗ ಹೆಚ್ಚುವರಿಯಾಗಿ ಮತ್ತೆ 80 ರೈಲುಗಳ ಸಂಚಾರ ಆರಂಭಿಸಲಾಗುತ್ತಿದೆ ಎಂದು ಯಾವದ್ ಹೇಳಿದ್ದಾರೆ.
ನಿರ್ದಿಷ್ಟ ರೈಲಿಗೆ ಬೇಡಿಕೆ ಇದ್ದರೆ ಅಥವಾ ವೆಟಿಂಗ್ ಪಟ್ಟಿ ದೊಡ್ಡದಾಗಿದ್ದರೆ ಅಂತಹ ಸಂದರ್ಭದಲ್ಲಿ ನಾವು ವಿಶೇಷ ರೈಲುಗಳನ್ನು ಓಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.