ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ನಡುವಲ್ಲೇ, ಕಳೆದ 24 ಗಂಟೆಗಳಲ್ಲಿ ಸಾರ್ವಕಾಲಿಕ ದಾಖಲೆಯ 12 ಲಕ್ಷ ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಭಾನುವಾರ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 12,06,806 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.19 ರವರೆಗೂ 6,36,61,060 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ನಡುವೆ ಭಾರತದಲ್ಲಿ ನಿನ್ನೆ ಒಂದೇ ದಿನ 93,337 ಹೊಸ ಕೇಸ್'ಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 53,08,015ಕ್ಕೆ ಏರಿಕೆಯಾಗಿದೆ.