ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 86,96 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ 1,053 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ ಒಟ್ಟು 75,083 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 55,62,664ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಗುಣಮುಖರ ಸಂಖ್ಯೆ 44,97,868ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶಾದ್ಯಂತ 1,053 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 88,935ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಒಟ್ಟು 9,75,861 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
24 ಗಂಟೆಗಳಲ್ಲಿ 9 ಲಕ್ಷಕ್ಕೂ ಅಧಿಕ ಕೋವಿಡ್ ಪರೀಕ್ಷೆ
ದೇಶಾದ್ಯಂತ ನಿನ್ನೆ 9,33,185 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಒಟ್ಟಾರೆ 6,53,25,779 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.