ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಒಂದೇ ದಿನ 92,605 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 54 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 1,133 ಮಂದಿ ಸಾವನ್ನಪ್ಪುವುದರೊಂದಿಗೆ ಮಹಾಮಾರಿ ವೈರಸ್ ಈವರೆಗೂ 86,752 ಮಂದಿಯನ್ನು ಬಲಿಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
ಭಾರತದಲ್ಲಿ ಪ್ರಸ್ತುತ ಒಟ್ಟು ಸೋಂಕಿತರ ಸಂಖ್ಯೆ 54,00,620ಕ್ಕೆ ಏರಿಕೆಯಾಗಿದ್ದು, 54 ಲಕ್ಷ ಸೋಂಕಿತರ ಪೈಕಿ ಈವರೆಗೂ 43,03,044 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿ ಇನ್ನೂ 10,10,824 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ.