ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ 2020 ಟೂರ್ನಿಯ ಮೂರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ 10 ರನ್ ಗಳಿಂದ ಗೆಲುವು ಸಾಧಿಸಿದೆ.
ಸೈನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು 19. 4 ಓವರ್ ಗಳಲ್ಲಿ ಆಲ್ ಔಟ್ ಮಾಡುವಲ್ಲಿ ಯಶಸ್ವಿಯಾದ ಆರ್ ಸಿಬಿ ಶುಭಾರಂಭ ಮಾಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ, ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿತು. ಆರಂಭಿಕ ಆಟಗಾರರಾದ ದೇವದತ್ ಪಡಿಕ್ಕಲ್ ಅವರ ಆಕರ್ಷಕ 56 ಮತ್ತು ಎಬಿ ಡಿವಿಲಿಯರ್ಸ್ 51, ಹಾಗೂ ಆರೋನ್ ಫಿಂಚ್ ಅವರ 29 ರನ್ ಗಳ ನೆರವಿನಿಂದ 160ರ ಗಡಿ ದಾಟಲು ತಂಡ ಯಶಸ್ವಿಯಾಯಿತು.
ಈ ಗುರಿ ಬೆನ್ನತ್ತಿದ್ದ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಪರ ಜಾನಿ ಬೇರ್ಸ್ಟೋವ್ 61, ಮನೀಶ್ ಪಾಂಡೆ, ಪ್ರಿಯಮ್ ಗರ್ಗ್ 12 ರನ್ ಗಳಿಸುವ ಮೂಲಕ 19. 4 ಓವರ್ ಗಳಲ್ಲಿ 153 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು.ಯಜುವೇಂದ್ರ ಚಹಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.