ಶಾರ್ಜ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಡಾಂಗಣದಲ್ಲಿ ನಡೆದ ಐಪಿಎಲ್ 2020 ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ 16 ರನ್ ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 216 ರನ್ ಗಳಿಸಿತು. ಸಂಜು ಸ್ಯಾಮ್ಸನ್ ಹಾಗೂ ನಾಯಕ ಸ್ವೀವ್ ಸ್ಮಿತ್ ಆಕರ್ಷಕ ಅರ್ಧ ಶತಕ ಸಿಡಿಸಿದರು. ಒಂಬತ್ತು ಭರ್ಜರಿ ಸಿಕ್ಸರ್ ಸಿಡಿಸಿದ ಸ್ಯಾಮ್ಸನ್ ಕೇವಲ 32 ಎಸೆತಗಳಲ್ಲಿ 74 ರನ್ ಗಳಿಸಿದರೆ, ಸ್ಮಿತ್ 69 ರನ್ ಗಳಿಸಿದರು.
ಈ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ 200 ಗಳಿಸಲಷ್ಟೇ ಸಫಲವಾಯಿತು. ಫ್ಲೆಸಿ 7 ಸಿಕ್ಸರ್ ಮತ್ತು ಒಂದು ಬೌಜಡರಿ ಸಹಿತ 72 ರನ್ ಗಳಿಸಿ ಕೊನೆಯವರೆಗೂ ನಡೆಸಿದ ಹೋರಾಟ ವ್ಯರ್ಥವಾಯಿತು. ರಾಯಲ್ಸ್ ಪರ ರಾಹುಲ್ ತೆವಾತಿಯಾ 37 ರನ್ ನೀಡಿ 3 ವಿಕೆಟ್ ಪಡೆದರು.