ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ- 2020 (ಎನ್‌ಇಪಿ -2020) ಅಡಿಯಲ್ಲಿ “21 ನೇ ಶತಮಾನದಲ್ಲಿ ಶಾಲಾ ಶಿಕ್ಷಣ” ಕುರಿತ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಾತನಾಡಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ಪ್ರಧಾನಿ ಕಚೇರಿ ಗುರುವಾರ ತಿಳಿಸಿದೆ.
ಶಿಕ್ಷಣ ಸಚಿವಾಲಯವು ಸೆಪ್ಟೆಂಬರ್ 10 ಮತ್ತು 11 ರಂದು ಶಿಕ್ಷ ಣ ಪರ್ವ ಅಂಗವಾಗಿ ಈ ಎರಡು ದಿನಗಳ ಸಮಾವೇಶವನ್ನು ಆಯೋಜಿಸುತ್ತಿದೆ.