ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 11,69,765 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶುಕ್ರವಾರ ಮಾಹಿತಿ ನೀಡಿದೆ.
ನಿನ್ನೆ ಒಂದೇ ದಿನ ದೇಶಾದ್ಯಂತ 11,69,765 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.3ರವರೆಗೂ 4,66,79,145 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಒಂದೇ ದಿನ ದೇಶದಲ್ಲಿ ಬರೋಬ್ಬರಿ ದಾಖಲೆಯ 83,341 ಮಂದಿಯಲ್ಲಿ ವೈರಸ್ ತಗಲಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39,36,748ಕ್ಕೆತಲುಪಿದೆ. ಅಲ್ಲದೆ 24 ಗಂಟೆಗಳಲ್ಲಿ 1,096 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ ಕೂಡ 63,498ಕ್ಕೆ ಏರಿಕೆಯಾಗಿದೆ.