ಮಂಜೇಶ್ವರ: ಕಡಂಬಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಮಹಿಳಾ ಸಮಿತಿ ಗೌರವಾಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿರುವ ಸಂಕಣ್ಣಯ್ಯರ ಪತ್ನಿ ಇಂದಿರಮ್ಮರ ನಿಧನಕ್ಕೆ ಸಂತಾಪ ಸೂಚಕ ಸಭೆ ಬುಧವಾರ ಸಂಜೆ ಕಡಂಬಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ಅವಿರತವಾಗಿ ಸೇವೆ ಸಲ್ಲಿಸುತ್ತಾ, ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ತೊಡಗಿಸಿಕೊಂಡಿದ್ದರು. ಕ್ಷೇತ್ರದ ಹಿಂದಿನ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ ಶಂಕರ ನಾರಾಯಣ ಅಯ್ಯ ಯಾನೆ ಶಂಕಣ್ಣಯ್ಯರ ಪತ್ನಿಯಾಗಿರುವರು.
ಸಭೆಯಲ್ಲಿ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷರಾದ ಚಂದಪ್ಪ ಶೆಟ್ಟಿ ಕಜೆಕೋಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಧರ್ಮೇಮಾರ್, ಮಹಿಳಾ ಸಮಿತಿ ಅಧ್ಯಕ್ಷೆ ಸುಂದರಿ ಆರ್. ಶೆಟ್ಟಿ, ಕ್ಷೇತ್ರದ ಪವಿತ್ರಪಾಣಿ ಸುಬ್ರಹ್ಮಣ್ಯ ಅನಲತ್ತಾಯ, ಸೇವಾ ಸ್ಫೂರ್ತಿ ಅಧ್ಯಕ್ಷ ಭಾಸ್ಕರ ಹೆದ್ದಾರಿ, ಕ್ಷೇತ್ರದ ಆಡಳಿತ ಮೊಕ್ತೇಸರ ಎಸ್.ಎನ್ ಕಡಂಬಾರ್, ಕ್ಷೇತ್ರದ ಅರ್ಚಕರಾದ ಶ್ರೀಕಾಂತ್ ಮಾಣಿಲತ್ತಾಯ, ಜೀರ್ಣೋದ್ಧಾರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸಂಕಬೈಲ್ ಸತೀಶ್ ಅಡಪ, ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರ ಪ್ರಭಾಕರ ಬಳ್ಳಕುರಾಯ, ಇಂದಿರಮ್ಮರ ಮಕ್ಕಳಾದ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ರಾವ್, ಹೇಮಾ ಬೆಹರೈನ್, ವಿಜಯಲಕ್ಷ್ಮಿ ರಾವ್ ನ್ಯೂಯಾರ್ಕ್, ಅಳಿಯ ಶ್ರೀಧರ ರಾವ್ ನ್ಯೂಯಾರ್ಕ್ ಮೊದಲಾದವರು ಉಪಸ್ಥಿತರಿದ್ದು, ಅಗಲಿದ ಇಂದಿರಮ್ಮರ ಬಗ್ಗೆ ಗುಣಗಾನ ಮಾಡಿದರು. ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಚಿದಂಬರಂ ಕೋಡಿಜಾಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಇಂದಿರಮ್ಮನ ಹೆಸರಿನಲ್ಲಿ ಕ್ಷೇತ್ರಕ್ಕೆ ಜೀರ್ಣೋದ್ಧಾರ ಕಾರ್ಯಕ್ಕೆ ರೂ. 1 ಲಕ್ಷ ನೀಡಲು ಮನೆಯವರು ನಿರ್ಧರಿಸಿದ್ದು, ಇದರ ಮುಂಗಡವಾಗಿ 20 ಸಾವಿರ ರೂ. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ, ಸೇವಾ ಸಮಿತಿ, ಮಹಿಳಾ ಸಮಿತಿ, ಸೇವಾ ಸ್ಫೂರ್ತಿಯ ಉಪಸ್ಥಿತಿಯಲ್ಲಿ ನೀಡಲಾಯಿತು.