ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯ ಅಂಬೇಡ್ಕರ್ ವೃತ್ತದಿಂದ ಲೈಟ್ ಹೌಸ್ ಮಾರ್ಗದ ಕ್ಯಾಥೋಲಿಕ್ ಕ್ಲಬ್ ವರೆಗಿನ ರಸ್ತೆಗೆ "ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ" ಎಂದು ನಾಮಕರಣ ಮಾಡಲು ಸರಕಾರ ಆದೇಶ ನೀಡಿದೆ.
ಈ ಹಿಂದೆ ‘ಮುಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ’ ಎಂದು ನಾಮಕರಣ ಮಾಡಲು ಸರಕಾರ ಆದೇಶಿಸಿತ್ತು. ಇದನ್ನು ವಿರೋಧಿಸಿ ಆಕ್ಷೇಪಣೆ, ವಿರೋಧಗಳು ಕೇಳಿ ಬಂದ ಹಿನ್ನಲೆಯಲ್ಲಿ ಸರ್ಕಾರ ರಸ್ತೆ ನಾಮಮಕರಣಕ್ಕೆ ಸರಕಾರ ತಡೆ ನೀಡಿತ್ತು.