ಕಾಸರಗೋಡು: ನೀಲೇಶ್ವರ ಬ್ಲಾಕ್ ಪಂಚಾಯತ್ ನ ಚೆರುವತ್ತೂರು ವಿ.ವಿ.ಸ್ಮಾರಕ ಸಮಾಜ ಆರೋಗ್ಯ ಕೇಂದ್ರ ಉದ್ಘಾಟನೆ ಸೋಮವಾರ ನಡೆಯಿತು. ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಟೀಚರ್ ವೀಡಿಯೋ ಕಾನ್ ಫೆರೆನ್ಸ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕಾಸರಗೋಡು ಜಿಲ್ಲೆಯ ಆರೋಗ್ಯ ವಲಯ ಉತ್ತಮ ಗುಣಮಟ್ಟಕ್ಕೇರಿದೆ. ವಿವಿಧ ಯೋಜನೆಗಳ ಮೂಲಕ ಆರೋಗ್ಯ ವಲಯದಲ್ಲಿ ನೂತನ ಕಟ್ಟಡಗಳು, ಸೌಲಭ್ಯಗಳು ಹೆಚ್ಚಳಗೊಳ್ಳುತ್ತಿವೆ ಎಂದು ನುಡಿದರು.
ಶಾಸಕ ಎಂ.ರಾಜಗೋಪಾಲನ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿದ್ದರು. ಮಾಜಿ ಶಾಸಕ ಎಂ.ಕುಮಾರನ್, ನೀಲೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷೆ ವಿ.ಪಿ.ಜಾನಕಿ ಮೊದಲಾದವರು ಉಪಸ್ಥಿತರಿದ್ದರು.