ಕಾಸರಗೋಡು: ಅಂಟುರೋಗ ನಿಯಂತ್ರಣ ಕಾಯಿದೆ ಪ್ರಕಾರ ದಾಖಲಿಸುವ ಕೇಸುಗಳಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಇನ್ನು ಮುಂದೆ(ಸೆ.7ರಿಂದ) ಹೇರಲಾಗುವ ದಂಡವನ್ನು ಹತ್ತು ಪಟ್ಟು ಅಧಿಕಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು.
ಸೋಮವಾರ ನಡೆದ ಐ.ಇ.ಸಿ. ಸಂಚಲನ ಸಮಿತಿ ಜಿಲ್ಲಾ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಲಾಕ್ ಡೌನ್ ಉಲ್ಲಂಘನೆ, ಕ್ವಾರೆಂಟೈನ್ ಉಲ್ಲಂಘನೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದು, ಮಾಸ್ಕ್ ಧರಿಸದೇ ಇರುವುದು, ಅಂಗಡಿಗಳಲ್ಲಿ, ಸಾರ್ವಜನಿಕ ಪ್ರದೇಶಗಳಲ್ಲಿ ಗುಂಪು ಸೇರುವುದು ಇತ್ಯಾದಿ ಆದೇಶ ಉಲ್ಲಂಘನೆಗಳಿಗೆ ಸಂಬಂಧಪಟ್ಟು ದಾಖಲಿಸುವ ಕೇಸುಗಳ ಪ್ರಕಾರದ ದಂಡಗಳಲ್ಲಿ ಈ ಪ್ರಮಾಣದಲ್ಲಿ ಹೆಚ್ಚಳಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿರುವರು.
ಅಂಟುರೋಗ ನಿಯಂತ್ರಣ ಕಾಯಿದೆಯನ್ನು ಕಡ್ಡಾಯವಾಗಿ ಪಾಲಿಸದೇ ಇರುವ ಕಾರಣ ಕಾಸರಗೋಡು ಜಿಲ್ಲೆಯಲ್ಲಿ ಸಾಮೂಹಿಕವಾಗಿ ಸೋಂಕು ಹೆಚ್ಚಳವುಂಟಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದವರು ತಿಳಿಸಿರುವರು.