ತಿರುವನಂತಪುರ: ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆ ಗಂಭೀರ ಹಂತದಲ್ಲಿದೆ ಎಂದು ಕಸ್ಟಮ್ಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಆರೋಪಿಗಳ ಹಿಂದೆ ಹೆಚ್ಚಿನ ಜನರಿರುವುದಕ್ಕೆ ಪುರಾವೆಗಳು ದೊರೆತಿವೆ. ರಾಜಕಾರಣಿಗಳು, ಪೆÇಲೀಸ್ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳ ವಿರುದ್ಧ ಒಂದೊಂದಾಗಿ ಸಾಕ್ಷ್ಯಗಳನ್ನು ಪಡೆಯಲಾಗಿದೆ ಎಂದು ಕಸ್ಟಮ್ಸ್ ತಿಳಿಸಿದೆ. ಕಾನೂನು ಕ್ರಮಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಕಸ್ಟಮ್ಸ್ ಹೇಳಿದೆ. ಶಿವಶಂಕರ್ ಅವರನ್ನು ಇನ್ನಷ್ಟು ತನಿಖೆಗೆ ಒಳಪಡಿಸುವ ಅಗತ್ಯವಿದ್ದು ವಾಪಸ್ ಕರೆಸಿಕೊಳ್ಳಲಾಗುವುದು ಎಂದು ಕಸ್ಟಮ್ಸ್ ತಿಳಿಸಿದೆ.
ಕಳೆದ ನಾಲ್ಕು ವರ್ಷಗಳಲ್ಲಿ ಬಂದಿರುವ ರಾಜತಾಂತ್ರಿಕ ಚೀಲಗಳ ವಿವರಗಳನ್ನು ಕಸ್ಟಮ್ಸ್ ಕೋರಿದೆ. ರಾಜ್ಯ ಶಿಷ್ಟಾಚಾರ ಇಲಾಖೆ ಮತ್ತು ಕೇಂದ್ರ ವಿದೇಶಾಂಗ ಸಚಿವಾಲಯದಿಂದ ಮಾಹಿತಿ ಕೋರಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಬಂಧನಗಳು ಮುಂದೆ ನಡೆಯಲಿದೆ ಎಂದು ಕಸ್ಟಮ್ಸ್ ಹೇಳಿದೆ
.