ತಿರುವನಂತಪುರ: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ಸಿದ್ದಗೊಳ್ಳುತ್ತಿದ್ದು ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಚುನಾವಣೆ ನಡೆಸದಿರಲು ಚಿಂತಿಸಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಅವರು ಪ್ರತಿಪಕ್ಷಗಳಿಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ. ಕೋವಿಡ್ ಪರಿಸ್ಥಿತಿಯನ್ನು ಪರಿಗಣಿಸಿ ಚುನಾವಣಾ ಆಯೋಗವನ್ನು ಸಂಪರ್ಕಿಸಲು ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ.
ಚುನಾವಣೆಯನ್ನು ತಪ್ಪಿಸುವ ಕ್ರಮಕ್ಕೆ ಮುಖ್ಯಮಂತ್ರಿಗಳು ತಮ್ಮ ಬೆಂಬಲ ಕೋರಿ ಸಂಪರ್ಕಿಸಿದ್ದಾರೆ ಎಂದು ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ. ಮಂಗಳವಾರ ನಡೆದ ಯುಡಿಎಫ್ ಸಭೆಯಲ್ಲಿ ರಮೇಶ್ ಚೆನ್ನಿತ್ತಲ ಅವರು ಉಪಚುನಾವಣೆಯನ್ನು ಕೈಬಿಡುವಂತೆ ಚುನಾವಣಾ ಆಯೋಗವನ್ನು ಕೇಳುವ ಸಲಹೆಯಿದೆ ಎಂದು ಸ್ಪಷ್ಟಪಡಿಸಿದರು.
ಆದರೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲ್ಪಟ್ಟರೆ ಪ್ರತಿಪಕ್ಷವು ಉಪಚುನಾವಣೆಗಳನ್ನು ನಡೆಸದಿರುವ ಬಗ್ಗೆ ಸರ್ಕಾರ ನೀಡಿರುವ ಪ್ರಸ್ತಾಪನೆಗೆ ಸಹಕರಿಸಬಹುದು ಎಂದು ಯುಡಿಎಫ್ ಅಭಿಪ್ರಾಯಪಟ್ಟಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ ಆರು ತಿಂಗಳು ಮಾತ್ರ ಉಳಿದಿದೆ. ಈ ಸಂದರ್ಭದಲ್ಲಿ ಉಪಚುನಾವಣೆ ನಡೆಸಿದಲ್ಲಿ ಹೊಸದಾಗಿ ಚುನಾಯಿತರಾದ ಶಾಸಕರಿಗೆ ಕಾರ್ಯನಿರ್ವಹಿಸಲು ಕೇವಲ ಐದು ತಿಂಗಳಿಗಿಂತ ಕಡಿಮೆ ಅವಕಾಶವಿರುವುದರಿಂದ ಸರ್ಕಾರ ಈ ಪ್ರಸ್ತಾವನೆ ಮುಂದಿಟ್ಟಿದೆ ಎನ್ನಲಾಗಿದೆ.
ರಾಜಕೀಯ ಪಕ್ಷಗಳು ಈ ವಿಷಯದ ಬಗ್ಗೆ ಒಮ್ಮತದ ನಿರ್ಧಾರ ತೆಗೆದುಕೊಂಡರೆ ಮಾತ್ರ ಈ ನಿಟ್ಟಿನಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಬಹುದು. ಈ ಕುರಿತು ನಿರ್ಧಾರ ತೆಗೆದುಕೊಳ್ಳುವ ಮೊದಲು ಮುಖ್ಯಮಂತ್ರಿಗಳು ಪ್ರತಿಪಕ್ಷದ ನಾಯಕನನ್ನು ದೂರವಾಣಿಯಲ್ಲಿ ಸಂಪರ್ಕಿಸಿದ್ದರು. ಇದೇ ವೇಳೆ ಎಲ್‍ಡಿಎಫ್ ಕನ್ವೀನರ್ ವಿಜಯರಾಘವನ್ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ವಿಧಾನಸಭಾ ಉಪಚುನಾವಣೆಗಳನ್ನು ಎರಡನ್ನೂ ಒಂದಾಗಿ ನೋಡಬೇಕು ಎಂದು ಹೇಳಿರುವರು.