ಮಂಜೇಶ್ವರ: ಕಾಸರಗೋಡು - ಮಂಗಳೂರು ಕೆ.ಎಸ್.ಆರ್.ಟಿ.ಸಿ ಅಂತರ್ ರಾಜ್ಯ ಬಸ್ ಸೇವೆಯನ್ನು ಶೀಘ್ರ ಪುನರಾರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕೆ.ಎಸ್.ಆರ್.ಟಿ.ಸಿ ಮೆನೇಜಿಂಗ್ ಡೈರೆಕ್ಟರ್ ರವರಿಗೆ ಬಿಜೆಪಿ ಮಂಜೇಶ್ವರದ ನಿಯೋಗದವರು ಭೇಟಿಯಾಗಿ ಮನವಿ ಸಲ್ಲಿಸಿದರು.
ಓಬಿಸಿ ಮೋರ್ಚಾ ಕೇರಳ ರಾಜ್ಯ ಕೋಶಾಧಿಕಾರಿ ನ್ಯಾಯವಾದಿ ನವೀನ್ ರಾಜ್ ಕೆ.ಜೆ ಅವರು ಮನವಿ ಸಲ್ಲಿಸಿದರು. ಈ ವೇಳೆ ಬಿಜೆಪಿ ಮಂಜೇಶ್ವರ ಮಂಡಲ ಉಪಾಧ್ಯಕ್ಷ ಪದ್ಮನಾಭ ಕಡಪ್ಪರ, ಪ್ರಧಾನ ಕಾರ್ಯದರ್ಶಿ ಆದರ್ಶ್ ಬಿ.ಎಂ, ಓಬಿಸಿ ಮೋರ್ಚಾ ಮಂಜೇಶ್ವರ ಪಂಚಾಯತಿ ಸಮಿತಿ ಪ್ರಧಾನ ಕಾರ್ಯದರ್ಶಿ ದಯಾ ಪ್ರಸನ್ನ ಆಚಾರ್ಯ, ಯುವಮೋರ್ಚಾ ಮಂಜೇಶ್ವರ ಪಂಚಾಯತಿ ಸಮಿತಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಹೆಗ್ಡೆ ಮಂಜೇಶ್ವರ, ಬಿಜೆಪಿ ಮಂಜೇಶ್ವರ ಪಂಚಾಯತಿ ಸಮಿತಿ ಕಾರ್ಯದರ್ಶಿ ಯಶ್ ರಾಜ್ ಉದ್ಯಾವರ, ಓಬಿಸಿ ಮೋರ್ಚಾ ಮೀಡಿಯಾ ಸೆಲ್ ಕನ್ವಿನರ್ ರತನ್ ಕುಮಾರ್ ಹೊಸಂಗಡಿ ಮೊದಲಾದವರು ಉಪಸ್ಥಿತರಿದ್ದರು.
ಕಳೆದ 6 ತಿಂಗಳಿನಿಂದ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಇದೀಗ ಲಾಕ್ ಡೌನ್ ಸಡಿಲಗೊಂಡರೂ, ಅಂತರ್ ರಾಜ್ಯ ಗಡಿ ತೆರವುಗೊಳಿಸಿದರೂ ಬಸ್ ಸಂಚಾರ ಪ್ರಾರಂಭವಾಗಿಲ್ಲ. ಇದರಿಂದಾಗಿ ಮಂಗಳೂರನ್ನು ಅವಲಂಬಿಸಿರುವ ನಿತ್ಯ ಉದ್ಯೋಗಸ್ಥರು ಸಂಕಷ್ಟಕ್ಕೀಡಾಗಿದ್ದರೆ. ಅನಾರೋಗ್ಯ ಪೀಡಿತರಾಗಿ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಯನ್ನು ಆಶ್ರಯಿಸುವ ರೋಗಿಗಳು ಸಂಕಷ್ಟಕ್ಕೀಡಾಗಿದ್ದರೆ. ಜೊತೆಗೆ ಶಾಲಾ - ಕಾಲೇಜು ವಿದ್ಯಾರ್ಥಿಗಳು ಬಸ್ ಸಂಚಾರವಿಲ್ಲದೆ ಸಂಕಷ್ಟಕ್ಕೀಡಾಗಿದ್ದರೆ.
ಈ ಸಂದರ್ಭ ಮನವಿಯನ್ನು ಬೆಂಗಳೂರು ಕೆಎಸ್‍ಆರ್‍ಟಿಸಿ ಹಿರಿಯ ಪ್ರಬಂಧಕ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಹಾಗೂ ಕಾಸರಗೋಡು ಜಿಲ್ಲಾಧಿಕಾರಿ, ಕೇರಳ ರಾಜ್ಯ ಕೆ.ಎಸ್.ಆರ್.ಟಿ.ಸಿಯ ತಿರುವನಂತಪುರದ ಆಡಳಿತ ನಿರ್ದೇಶಕ, ಕೇರಳ ರಾಜ್ಯ ರಸ್ತೆ ಸಾರಿಗೆ ಪ್ರಿನ್ಸಿಪಲ್ ಕಾರ್ಯದರ್ಶಿ, ಕಾಸರಗೋಡು ವಿಭಾಗದ ಹಿರಿಯ ಪ್ರಬಂಧಕ, ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದ ಆಡಳಿತ ನಿರ್ದೇಶಕ, ಕರ್ನಾಟಕ ಸಾರಿಗೆಯ ಕೇಂದ್ರ ಕಾರ್ಯಾಲಯಗಳಿಗೆ ನೀಡಲಾಯಿತು.