ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಸಂಪೂರ್ಣ ವೈದ್ಯಕೀಯ ತಪಾಸಣೆಗಾಗಿ ಒಂದೆರಡು ದಿನಗಳ ಕಾಲ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆ ತಿಳಿಸಿದೆ.
ಕಳೆದ ಆಗಸ್ಟ್ 30ರಂದು ಇದೇ ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಅಮಿತ್ ಶಾ ಬಿಡುಗಡೆ ಹೊಂದಿದ್ದರು. ಆದರೆ ಕಳೆದ ರಾತ್ರಿ ಮತ್ತೆ ಅವರಿಗೆ ಉಸಿರಾಟ ಸಮಸ್ಯೆ ಕಂಡುಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
ಈ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಏಮ್ಸ್ ಆಸ್ಪತ್ರೆಯ ಅಧ್ಯಕ್ಷರು, ಡಿಸ್ಚಾರ್ಜ್ ದಿನ ನೀಡಿದ್ದ ಸಲಹೆ ಪ್ರಕಾರ ಮುಂಗಾರು ಅಧಿವೇಶನಕ್ಕೆ ಮುನ್ನ ದೇಹದ ಸಂಪೂರ್ಣ ತಪಾಸಣೆಗಾಗಿ ಒಂದೆರಡು ದಿನಗಳ ಮಟ್ಟಿಗೆ ದಾಖಲಾಗಿದ್ದಾರೆ ಎಂದಿದ್ದಾರೆ.