ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ಉದ್ಯಮಿ ದೀಪಕ್ ಕೊಚ್ಚರ್ ಅವರನ್ನು ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ವಿಡಿಯೋಕಾನ್ ಇಂಡಸ್ಟ್ರೀಸ್ ಜೊತೆಗಿನ ವ್ಯವಹಾರದ ಬಗ್ಗೆ ತನಿಖೆ ನಡೆಸಿದ ನಂತರ ಜಾರಿ ನಿರ್ದೇಶನಾಲಯ ದೀಪಕ್ ಕೊಚ್ಚರ್ ಅವರನ್ನು ಬಂಧಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಚಂದಾ ಕೊಚ್ಚರ್ ಅವರನ್ನು ಕಸ್ಟಡಿ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ನಾಳೆ ಸೆಷನ್ಸ್ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುವುದು ಎಂದು ಇಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಕ್ರಿಮಿನಲ್ ಪಿತೂರಿ ಮತ್ತು ವಂಚನೆ ಪ್ರಕರಣವನ್ನು ದಾಖಲಿಸಿದ್ದು, ಚಂದಾ ಕೊಚ್ಚರ್ ನೇತೃತ್ವದ ಐಸಿಐಸಿಐ ಬ್ಯಾಂಕ್, ವಿಡಿಯೋಕಾನ್ ಇಂಡಸ್ಟ್ರೀಸ್ ಗೆ ಸಾಲ ನೀತಿ ನಿಯಮ ಉಲ್ಲಂಘಿಸಲಾಗಿದೆ ಹೆಚ್ಚು ಸಾಲ ಮಂಜೂರು ಮಾಡಲಾಗಿದೆ ಎಂದೂ ಆರೋಪಿಸಲಾಗಿದೆ.