ಉಪ್ಪಳ: ಕಾಸರಗೋಡು ಜಿಲ್ಲಾ ಪಂಚಾಯತಿ ನೆರವಿನಿಂದ ಪೈವಳಿಕೆ ನಗರ ಹೈಯ್ಯರ್ ಸೆಕೆಂಡರಿ ಶಾಲೆಯಲ್ಲಿ ರೂ. 60 ಲಕ್ಷ ವ್ಯಯಿಸಿ ನಿರ್ಮಿಸಲಾದ ನೂತನ ಕಟ್ಟಡದ ಉದ್ಘಾಟನೆ ಮಂಗಳವಾರ ನೆರವೇರಿತು.
ಕಾಸರಗೋಡು ಜಿ.ಪಂ.ಅಧ್ಯಕ್ಷ ಎಜಿಸಿ ಬಶೀರ್ ಕಟ್ಟಡ ಉದ್ಘಾಟಿಸಿದರು. ಜಿ.ಪಂ.ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ಪೈವಳಿಕೆ ಗ್ರಾ.ಪಂ ಅಧ್ಯಕ್ಷೆ ಭಾರತಿ ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತು ಉಪಾಧ್ಯಕ್ಷೆ ಸುನಿತಾ ಡಿ.ಸೋಜಾ, ಶಾಲಾ ರಕ್ಷಕ - ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಪಾವಲಕೋಡಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹನೀಫ್ ಹಾಜಿ, ಉಪಾಧ್ಯಕ್ಷ ರಮೇಶ್ ಉಪಸ್ಥಿತರಿದ್ದರು. ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪ್ಲಸ್ ಟು ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಇಬ್ರಾಹಿಂ ಬಿ.ಸ್ವಾಗತಿಸಿ, ಶ್ರೀನಿವಾಸ ಮಾಸ್ತರ್ ವಂದಿಸಿದರು. ಅಧ್ಯಾಪಕ ಅಶ್ರಫ್ ಮತ್ರ್ಯ ಕಾರ್ಯಕ್ರಮ ನಿರೂಪಿಸಿದರು. ಕಟ್ಟಡದ ಗುತ್ತಿಗೆದಾರ ಅಂದುಂಞ ಹಾಜಿಯವರನ್ನು ಸಮ್ಮಾನಿಸಲಾಯಿತು.