ಉಪ್ಪಳ: ಪೈವಳಿಕೆ ಕಳಾಯಿ ನಿವಾಸಿ ಕೊಮ್ಮೆ ರಾಮಕೃಷ್ಣ ಭಟ್ (79) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದವರು ಭಾನುವಾರ ನಿಧನಹೊಂದಿದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿರುವರು. ಇವರು ಜನಸಂಘ ಮತ್ತು ರಾ.ಸ್ವ.ಸಂಘದ ಹಿರಿಯ ಕಾರ್ಯಕರ್ತರಾಗಿದ್ದು ತುರ್ತು ಪರಿಸ್ಥಿತಿ ವಿರುದ್ಧ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಇಳಿ ವಯಸ್ಸಿನಲ್ಲೂ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಪೈವಳಿಕೆ ಗ್ರಾ.ಪಂ.ಚುನಾವಣೆಗೆ ಎರಡು ಬಾರಿ ಸ್ಪರ್ಧಿಸಿದ್ದರು. ಕಾಯರ್‍ಕಟ್ಟೆ ಶ್ರೀ ಅಯ್ಯಪ್ಪ ಭಜನಾ ಮಂದಿರದ ಉಪಾಧ್ಯಕ್ಷರಾಗಿದ್ದರು.