ಮಂಜೇಶ್ವರ: ಮಂಜೇಶ್ವರ ಶಾಸಕ ಎಂ.ಸಿ.ಖಮರುದ್ದೀನ್ ಅವರು ಜುವೆಲ್ಲರಿ ವಂಚನೆ ಹಗರಣದಲ್ಲಿ ಸಿಲುಕಿರುವುದರಿಂದ ಅವರ ರಾಜೀನಾಮೆಗೆ ಒತ್ತಾಯಿಸಿ ಮಂಜೇಶ್ವರ ಮಂಡಲ ಬಿಜೆಪಿ ಅಧ್ಯಕ್ಷ ಮಣಿಕಂಠ ರೈ ಪಟ್ಲ ನೇತೃತ್ವದಲ್ಲಿ ಇಂದು ಉಪವಾಸ ಸತ್ಯಾಗ್ರಹ ನಡೆಯಲಿದೆ.
ಹಗರಣದ ಪ್ರಧಾನ ಆರೋಪಿ ಶಾಸಕ ಖಮರುದ್ದೀನ್ ರಾಜೀನಾಮೆ ನೀಡಬೇಕು, ವಂಚನೆ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು, ಶಾಸಕರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ಹೊಸಂಗಡಿಯ ಪ್ರೇರಣಾದಲ್ಲಿ ಬೆಳಿಗ್ಗೆ 10 ರಿಂದ ನಡೆಯಲಿದೆ.