ಕಾಸರಗೋಡು:ನಾಳೆ (ಸೆ.3 ರಂದು) ಮಂಜೇಶ್ವರದಲ್ಲಿ ನಡೆಯಲಿದ್ದ ಕೇರಳ ತುಳು ಅಕಾಡೆಮಿಯ ಕಟ್ಟಡ ಉದ್ಘಾಟನೆಯನ್ನು ಮುಂದೂಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಉಮೇಶ್ ಎಂ.ಸಾಲಿಯಾನ್ ತಿಳಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನದ ಶೋಕಾರ್ಥವಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಅಕಾಡೆಮಿಯ ಕಾರ್ಯಕಾರಿ ಸಮಿತಿ ಸಭೆ ಸೇರಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.