ಕಾಸರಗೋಡು:ಕೋವಿಡ್ ವ್ಯಾಪಕತೆಯ ಹಿನ್ನೆಲೆಯಲ್ಲಿ ಅನ್ ಲಾಕ್ 5 ರ ಭಾಗವಾಗಿ ವಿಧಿಸಲಾಗಿದ್ದ ನಿಷೇಧಾಜ್ಞೆ ಇಂದು ಕೊನೆಗೊಳ್ಳುತ್ತಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನ.15 ರ ವರೆಗೂ ಮತ್ತೆ ವಿಸ್ತರಿಸಲಾಗಿದೆ. ಈ ಪಟ್ಟಿಯಲ್ಲಿ ಕಾಸರಗೋಡು ಜಿಲ್ಲೆಯೂ ಇದೀಗ ಒಳಗೊಂಡಿದೆ.
ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ್, ಹೊಸದುರ್ಗ, ನೀಲೇಶ್ವರಂ, ಚಂದೇರಾ ಪೊಲೀಸ್ ಠಾಣೆ ಮಿತಿ ಮತ್ತು ಕಾಸರಗೋಡು ಜಿಲ್ಲೆಯ ಪರಪ್ಪ, ಉದಯಮಚಲ್ ಮತ್ತು ಪನತ್ತಡಿ ಪಟ್ಟಣ ಮಿತಿಗಳಲ್ಲಿ ಜಿಲ್ಲಾಧಿಕಾರಿ ಡಾ. ಡಿ.ಸಜಿತ್ ಬಾಬು ಘೋಷಿಸಿದ ನಿಷೇಧಾಜ್ಞೆ ಕೋವಿಡ್ 19 ರ ವಿಸ್ತರಣೆಯ ದೃಷ್ಟಿಯಿಂದ ನವೆಂಬರ್ 15 ರಂದು ಮಧ್ಯರಾತ್ರಿ 12 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಲಾಗಿದೆ.
ಸಮರಸ ಸುದ್ದಿಯ ನವೀನ ಮಾದರಿಯ ಯೂಟ್ಯೂಬ್ ಚಾನೆಲ್ ಗೆ ಓದುಗರ ಪ್ರತಿಕ್ರಿಯೆ ಮಹತ್ವಪೂರ್ಣದ್ದಾಗಿದ್ದು ಚಾನೆಲ್ ಚಂದಾದಾರರಾಗಿ (SUBSCRIBE) ಬೆಲ್ ಬಟನ್ ಅನುಮೋದಿಸುವ ಮೂಲಕ ನಮ್ಮನ್ನು ಪ್ರೋತ್ಸಾಹಿಸಬೇಕೆಂದು ವಿನಂತಿ.
ಸಮರಸ ಸುದ್ದಿ ಬಳಗ