ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 54,044 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 76,51,108ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ 717 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,15,914ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.
ಪ್ರತಿನಿತ್ಯ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದ್ದು, ನಿನ್ನೆ ಒಂದೇ ದಿನ 61,775 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಈ ವರೆಗೂ ದೇಶದಲ್ಲಿ ಒಟ್ಟಾರೆ 67,95,103 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶಲ್ಲಿನ್ನೂ 7,40,090 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,83,608 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 9,72,00,379 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.