ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ಕೊಂಚ ಇಳಿಕೆಯಾಗಿದ್ದು, ಭಾನುವಾರ ಒಟ್ಟಾರೆ 75,829 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಒಟ್ಟು ಸೋಂಕು ಪೀಡಿತರ ಸಂಖ್ಯೆ 65 ಲಕ್ಷ ಗಡಿಯನ್ನು ದಾಟಿ 65,49,374ಕ್ಕೆ ಏರಿಕೆಯಾಗಿದೆ.
ಒಂದೇ ದಿನ 940 ಮಂದಿ ಕೊರೋನಾದಿಂದ ನಿಧನರಾಗಿದ್ದು, ಹೀಗಾಗಿ ಒಟ್ಟಾರೆ ಮೃತರ ಸಂಖ್ಯೆ 1,01,782ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈ ನಡುವೆ 65,49,374 ಮಂದಿ ಸೋಂಕಿತರ ಪೈಕಿ 55,09,967 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 9,37,625 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.