ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 70 ಲಕ್ಷ ದಾಟಿದ್ದರೂ ಕಳೆದ 24 ಗಂಟೆಗಳಲ್ಲಿ 89,154 ಜನರು ಚೇತರಿಸಿಕೊಂಡಿದ್ದು, ಒಟ್ಟಾರೆ ಚೇತರಿಕೆ ಕಂಡ ಕೊರೋನಾ ಸೋಂಕಿತರ ಸಂಖ್ಯೆ 60 ಲಕ್ಷಕ್ಕೆ ಏರಿಕೆಯಾಗಿದೆ.
ಒಟ್ಟಾರೆ ಪ್ರಕರಣಗಳು ಏರಿಕೆಯಾಗುತ್ತಿರುವುದರ ನಡುವೆಯೂ 60 ಲಕ್ಷ ಜನರು ಚೇತರಿಸಿಕೊಂಡಿರುವುದು ಜಾಗತಿಕ ಮಟ್ಟದಲ್ಲಿ ಭಾರತ ಚೇತರಿಕೆ ಪ್ರಮಾಣವನ್ನು (ಶೇ.86.17) ಅತಿ ಹೆಚ್ಚು ಹೊಂದಿರುವ ದೇಶವಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಸತತ 8 ನೇ ದಿನ ಕೊರೋನಾದಿಂದ ಮೃತಪಟ್ಟಿರುವವರ ಸಂಖ್ಯೆ 1000 ಕ್ಕಿಂತಲೂ ಕಡಿಮೆ ಇದೆ ಹಾಗೂ ಸತತ ಮೂರನೇ ದಿನ ಸಕ್ರಿಯ ಕೊರೋನಾ ಪ್ರಕರಣಗಳು 9 ಲಕ್ಷಕ್ಕಿಂತಲೂ ಕಡಿಮೆ ಇದೆ.
ಶೇ.61 ರಷ್ಟು ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಟಾಪ್ 5 ರಾಜ್ಯಗಳೂ ಸಹ ಚೇತರಿಕೆ ಪ್ರಮಾಣದಲ್ಲಿ ಶೇ.54.3 ರಷ್ಟು ಕೊಡುಗೆ ನೀಡುತ್ತಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ ತಮಿಳುನಾಡು ಅತಿ ಹೆಚ್ಚು ಕೋವಿಡ್ ಪ್ರಕರಣಗಳಿರುವ ಟಾಪ್ 5 ರಾಜ್ಯಗಳಾಗಿವೆ.