ಶಾರ್ಜಾ: ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಕೋಲ್ಕತಾ ನೈಟ್ ರೈಡರ್ಸ್ ವಿರುದ್ದದ ಪಂದ್ಯದಲ್ಲಿ 82 ರನ್ ಗಳ ಭರ್ಜರಿ ಜಯ ದಾಖಲಿಸಿದೆ.
ಹಾಲಿ ವರ್ಷದ ಐಪಿಎಲ್ 28ನೇ ಪಂದ್ಯದಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವಿನ ಪಂದ್ಯದಲ್ಲಿ ಕೊಹ್ಲಿ ಪಡೆ 82 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆರ್ ಸಿಬಿ ನೀಡಿದ 195 ರನ್‌ಗಳ ಗುರಿ ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ಆರಂಭಿಕ ಪವರ್ ಪ್ಲೇ ಓವರ್‌ಗಳಲ್ಲಿ ರನ್‌ಗಳಿಸಲು ಹೆಣಗಾಡಿತು.