ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 48,268 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 81 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಒಟ್ಟಾರೆ ದೇಶದಲ್ಲಿ ಸೋಂಕಿತರ ಸಂಖ್ಯೆ 81,37,119ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ 551 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,21,641ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.
81,37,119 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 59,454 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 74,32,829ಕ್ಕೆ ತಲುಪಿದೆ. ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 5,82,649ಕ್ಕೆ ಇಳಿಕೆಯಾಗಿದೆ.