ನವದಹೆಲಿ: ಭಾರತದಲ್ಲಿ ಕೊರೋನಾ ವೈರಸ್'ನ ಮೊದಲ ಅಲೆ ತಗ್ಗಿದೆ ಎನ್ನುವುದಕ್ಕೆ ಇಂಬು ನೀಡುವಂತಹ ಬೆಳವಣಿಗೆ ಕಂಡುಬಂದಿದೆ. ಶುಕ್ರವಾರ 70,496 ಜನರಲ್ಲಿ ಮಾತ್ರ ಸೋಂಕು ಕಂಡು ಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 69,06,152ಕ್ಕೆ ಏರಿಕೆಯಾಗಿದೆ.
ಒಂದೇ ದಿನ 964 ಮಂದಿ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 1,06,490ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ 69,06,152 ಮಂದಿ ಸೋಂಕಿತರ ಪೈಕಿ ಈ ವರೆಗೂ 59,06,070 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 8,93,592 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.