ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಅಬ್ಬರ ತಗ್ಗುತ್ತಿರುವಂತೆಯೇ ಇತ್ತ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ ಎಂದು ಹೇಳಿದ್ದಾರೆ.
ಕಳೆದೊಂದು ವಾರದಿಂದ ಭಾರತದಲ್ಲಿ ಹೊಸ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ತಗ್ಗಿದ್ದು, ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೇ ಕಾರಣಕ್ಕೆ ಕೋವಿಡ್-19 ಸೋಂಕಿಗೆ ಚಿಕಿತ್ಸೆಯ ಬಗ್ಗೆ ಏನಾದರೂ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಬಹುದು ಎಂದು ಅಂದಾಜಿಸಲಾಗಿದೆ.