ಕಾಸರಗೋಡು: ಜಿಲ್ಲೆಯಲ್ಲಿ ಸಂಪರ್ಕ ಮೂಲಕ ಕೋವಿಡ್ ಸೋಂಕು ಅಧಿಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಪ್ರತಿರೋಧ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರ ನೇತೃತ್ವದಲ್ಲಿ ವೀಡಿಯೋ ಕಾನ್ ಫೆರೆನ್ಸ್ ಮೂಲಕ ಮೂಲಕ ನಡೆದ ಜಿಲ್ಲಾ ಮಟ್ಟದ ಕರೊನಾ ಕೋರ್ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ನಿಬಂಧನೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ರೋಗ ಹೆಚ್ಚಳ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಎಲ್ಲರೂ ಪೂರ್ಣಪ್ರಮಾಣದ ಜಾಗರೂಕತೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಆದೇಶ ಉಲ್ಲಂಘಿಸುವ ವ್ಯಾಪಾರ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೂ ಮುಂದಾಗಿದೆ. ವ್ಯಾಪಾರಿ ಸಂಸ್ಥೆಗಳ ಸಿಬ್ಬಂದಿ ಮಾಸ್ಕ್, ಗ್ಲೌಸ್ ಧರಿಸಬೇಕು ಎಂಬ ಆದೇಶ ಉಲ್ಲಂಘಿಸಿದ ಅಂಗಡಿಗಳನ್ನು 7 ದಿನಗಳ ಕಾಲ ಮುಚ್ಚುಗಡೆ ಮಾಡಲಾಗುವುದು. ಆದೇಶ ಉಲ್ಲಂಘಿಸುವ ವ್ಯಾಪಾರ ಸಂಸ್ಥೆಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳುವುದಾಗಿ ಸಭೆ ತಿಳಿಸಿದೆ.