ದುಬೈ: ದುಬೈ ನಲ್ಲಿ ನಡೆದ ಐಪಿಎಲ್-2020ಯ 40 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.
ರಾಜಸ್ಥಾನ ರಾಯಲ್ಸ್ ನೀಡಿದ್ದ 155 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ನಾಯಕ ಡೇವಿಡ್ ವಾರ್ನರ್ ಮತ್ತು ಜಾನಿ ಬೈರ್‍ಸ್ಟೋವ್ ಅವರ ವಿಕೆಟ್ ನ್ನು ಬಹುಬೇಗ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತ ಎದುರಿಸಿತು.
ಮೂರನೇ ವಿಕೆಟ್‍ಗೆ ಜೊತೆಯಾದ ಮನೀಷ್ ಪಾಂಡೆ ಹಾಗೂ ಶಂಕರ್ 140 ರನ್ ಗಳನ್ನು ಜೊತೆಯಾಟ ಆಡಿ ರೈಸರ್ಸ್ ಗೆ 8 ವಿಕೆಟ್‍ಗಳ ಜಯ ದೊರಕಿಸಿಕೊಟ್ಟಿದ್ದು, ಸನ್‍ರೈಸರ್ಸ್ ಹೈದರಾಬಾದ್ ತಂಡಕ್ಕಾಗಿ 100 ರನ್ ಗಳ ಜೊತೆಯಾಟವಾಡಿದ ಮೊದಲ ಜೋಡಿ ಎಂಬ ದಾಖಲೆ ನಿರ್ಮಿಸಿದ್ದಾರೆ.
ಜೊತೆಗೆ ಪಾಂಡೆ ಮತ್ತು ವಿಜಯ್ ಶಂಕರ್ ಕೇವಲ 30 ಎಸೆತಗಳಲ್ಲಿ ಅರ್ಧಶತಕದ ಜೊತೆಯಾಟವಾಡಿ ಆರಂಭದಲ್ಲಿ ಆಘಾತ ಎದುರಿಸಿದ್ದ ತಂಡಕ್ಕೆ ನೆರವಾದರು. ಈ ಮೂಲಕ ಅಂಕಪಟ್ಟಿಯಲ್ಲಿ ಎಸ್ ಹೆಚ್ಆರ್ ಗೆ ಐದನೇ ಸ್ಥಾನಕ್ಕೆ ಜಿಗಿದಿದೆ.