ಮುಳ್ಳೇರಿಯ: ಅಡೂರು ಹೈಯರ್ ಸೆಕೆಂಡರಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಶನಿವಾರ ನಡೆದಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವೀಡಿಯೋ ಕಾನ್ ಫೆರೆನ್ಸ್ ಮೂಲಕ ಶಿಲಾನ್ಯಾಸ ನಡೆಸಿದರು.ರಾಜ್ಯದ 144 ಸಾರ್ವಜನಿಕ ಶಿಕ್ಷಣಾಲಯಗಳು ಉನ್ನತಿ ಸಾಧಿಸಲಿದ್ದು, ಈ ಮೂಲಕ ಕಾಸರಗೋಡು ಜಿಲ್ಲೆಯ 5 ಶಾಲೆಗಳೂ ಅಭಿವೃದ್ಧಿ ಕಾಣುತ್ತಿವೆ.
ಶಿಕ್ಷಣ ಸಚಿವ ಪೆÇ್ರ.ಸಿ.ರವೀಂದ್ರನಾಥ್ ಅಧ್ಯಕ್ಷತೆ ವಹಿಸಿದ್ದರು. ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಮುಖ್ಯ ಅತಿಥಿಯಾಗಿದ್ದರು. ಹಣಕಾಸು ಸಚಿವ ಡಾ.ಟಿ.ಎಂ.ಥಾಮಸ್ ಐಸಕ್ ಪ್ರದಾನ ಭಾಷಣ ಮಾಡಿದರು.
ಸ್ಥಳೀಯ ಮಟ್ಟದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಕೆ.ಕುಞÂ ರಾಮನ್ ಶಿಲಾಫಲಕ ಅನಾವರಣಗೊಳಿಸಿದರು. ದೇಲಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಎ.ಮುಸ್ತಫಾ, ಉಪಾಧ್ಯಕ್ಷ ಸಿ.ಕೆ.ಕುಮಾರನ್, ಜಿಲ್ಲಾ ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷೆ ನ್ಯಾಯವಾದಿ ಎ.ಪಿ.ಉಷಾ, ಸಾರ್ವಜನಿಕ ಶಿಕ್ಷಣ ಸಂರಕ್ಷಣೆ ಯಜ್ಞ ಜಿಲ್ಲಾ ಸಂಚಾಲಕ ಪಿ.ದಿಲೀಪ್ ಕುಮಾರ್,ಟಿ.ನಿರ್ಮಲಾ, ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.