ಲಖ್ನೌ: ಹತ್ರಾಸ್ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಅಲ್ಲಾಹಾಬಾದ್ ಹೈಕೋರ್ಟ್ ನೊಟೀಸ್ ಜಾರಿಗೊಳಿಸಿದೆ. ಸ್ವಯಂಪ್ರೇರಿತವಾಗಿ ಈ ಪ್ರಕರಣವನ್ನು ಪರಿಗಣನೆಗೆ ತೆಗೆದುಕೊಂಡಿರುವ ಅಲ್ಲಾಹಾಬಾದ್ ಕೋರ್ಟ್ ನೊಟೀಸ್ ಜಾರಿಗೊಳಿಸಿದೆ.
ಸಂತ್ರಸ್ತ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಳು. ಆಕೆಯ ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ನೀಡದೇ ಆಕೆಯ ಕುಟುಂಬ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು. ಈ ಘಟನೆಯಿಂದ ಉತ್ತರ ಪ್ರದೇಶ ಪೊಲೀಸರು ಹಾಗೂ ಸರ್ಕಾರದ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗಿತ್ತು.
ಈ ನಡುವೆ ಸರ್ಕಾರಿ ಹೇಳಿಕೆ ನೀಡಿದ್ದು ದೆಹಲಿಯ ಆಸ್ಪತ್ರೆಯಲ್ಲಿ ಸಾವಿಗೀಡಾದ ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಫೋರೆನ್ಸಿಕ್ ವರದಿ ಮೂಲಕ ತಿಳಿದುಬಂದಿದೆ ಎಂದು ಹೇಳಿದೆ. ಕುತ್ತಿಗೆಯ ಭಾಗಕ್ಕೆ ಬಿದ್ದಿರುವ ಬಿದ್ದಿರುವ ಪೆಟ್ಟಿನಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ, ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದಕ್ಕೆ ಎಫ್ಎಸ್ಎಲ್ ವರದಿಯಲ್ಲಿ ಹೇಳಿದೆ ಎಂದು ಎಫ್ಎಸ್ಎಲ್ ವರದಿ ಬಂದಿದೆ ಎಂದು ಎಡಿಜಿ ಕಾನೂನು ಸುವ್ಯವಸ್ಥೆ ಪ್ರಶಾಂತ್ ಕುಮಾರ್ ಹೇಳಿದ್ದಾರೆ.