ಸಮರಸ ಚಿತ್ರ ಸುದ್ದಿ: ಕಾಸರಗೋಡು: ಚಿನ್ನಸಾಗಾಟ ಪ್ರಕರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಉನ್ನತ ಶಿಕ್ಷಣ ಸಚಿವ ಕೆ.ಟಿ ಜಲೀಲ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಉಪವಾಸ ಸತ್ಯಾಗ್ರಹವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಉದ್ಘಾಟಿಸಿ ಮಾತನಾಡಿದರು.