ಕಾಸರಗೋಡು: ರಾಜ್ಯ ಸರಕಾರದ ಸಾರ್ವಜನಿಕ ಶಿಕ್ಷಣ ಯೋಜನೆಯ ಅಂಗವಾಗಿ ಕಾಸರಗೋಡು ಸರಕಾರಿ ವಿಶೇಷ ಶಿಕ್ಷಕರ ತರಬೇತಿ ಕೇಂದ್ರಕ್ಕಾಗಿ ಹೆಚ್ಚುವರಿ ಸೌಲಭ್ಯಗಳೊಂದಿಗೆ ನಿರ್ಮಿಸಲಾದ ಸರಕಾರಿ ಅಂಧ ವಿದ್ಯಾಲಯದ ಆವರಣದ ನೂತನ ಕಟ್ಟಡ ಉದ್ಘಾಟನೆಗೊಂಡಿದೆ.
ವೀಡಿಯೋ ಕಾನ್ ಫೆರೆನ್ಸ್ ಮೂಲಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉದ್ಘಾಟಿಸಿದರು. ಶಿಕ್ಷಣ ಸಚಿವ ಪೆÇ್ರ.ಸಿ.ರವೀಂದ್ರನಾಥ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಸಭೆ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಮುಖ್ಯ ಅತಿಥಿಯಾಗಿದ್ದರು. ಹಣಕಾಸು ಸಚಿವ ಡಾ.ಟಿ.ಎಂ.ಥಾಮಸ್ ಐಸಕ್ ಯೋಜನೆ ಬಗ್ಗೆ ಮಾಹಿತಿ ನೀಡಿದರು.
ರಾಜ್ಯದ 90 ಶಾಲೆಗಳ ನೂತನ ಕಟ್ಟಡಗಳ ಉದ್ಘಾಟನೆ ಮತ್ತು 54 ಶಾಲೆಗಳ ಕಟ್ಟಡ ನಿರ್ಮಾಣ ಶಿಲಾನ್ಯಾಸಕ್ಕೆ ಚಾಲನೆಯನ್ನು ಮುಖ್ಯಮಂತ್ರಿ ಈ ವೇಳೆ ನೆರವೇರಿಸಿದರು.
ತರಬೇತಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ಅಂಗವಾಗಿ ನಡೆದ ಸಮಾರಂಭದಲ್ಲಿ ಶಾಸಕ ಎನ್.ಎ.ನೆಲ್ಲಿಕುನ್ನು ಶಿಲಾಫಲಕ ಅನಾವರಣಗೊಳಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್, ಕಾಸರಗೋಡು ನಗರಸಭೆ ಅಧ್ಯಕ್ಷೆ ಬಿಫಾತಿಮಾ ಇಬ್ರಾಹಿಂ, ಶಿಕ್ಷಣ ಉಪನಿರ್ದೇಶಕಿ ಕೆ.ವಿ.ಪುಷ್ಪಾ, ವಾರ್ಡ್ ಸದಸ್ಯೆ ಕೆ.ಸವಿತಾ ಟೀಚರ್, ತರಬೇತಿ ಸಂಚಾಲಕ ಸಿ.ರತ್ನಾಕರನ್, ಅಂಧ ವಿದ್ಯಾಲಯದ ಪ್ರಭಾರ ಮುಖ್ಯ ಶಿಕ್ಷಕಿ ಕೆ.ಕೆ.ಕೌಸಿಯಾ, ಕಾರ್ಯಕಾರಿ ಇಂಜಿನಿಯರ್ ಮುಹಮ್ಮದ್ ಮುನೀರ್ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಭಾವಂತ ವಿದ್ಯಾರ್ಥಿನಿ ಎಂ.ಆರ್.ಸಜಿನಾ ಅವರಿಗೆ ಅಭಿನಂದನೆ ನಡೆಯಿತು.