ಕಾಸರಗೋಡು: ಕೇರಳ ತುಳು ಅಕಾಡೆಮಿ ವತಿಯಿಂದ ಗಾಂಧಿ ಜಯಂತಿ ಆಚರಣೆ ನಡೆಯಿತು. ಅಧ್ಯಕ್ಷ ಉಮೇಶ್ ಎಂ.ಸಾಲಿಯಾನ್ ಅವರು ಸಮಾರಂಭವನ್ನು ಉದ್ಘಾಟಿಸಿದರು. ಪದಾಧಿಕಾರಿಗಳು ಮತ್ತು ಸದಸ್ಯರು ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿದರು. ಅಕಾಡೆಮಿಯ ಸ್ಥಾಪಕಾಧ್ಯಕ್ಷ ಡಾ.ವೆಂಕಟರಾಜ ಪುಣಿಂಚಿತ್ತಾಯ ಅವರ ಸಂಸ್ಮರಣೆ ದಿನವನ್ನು ಶೀಘ್ರದಲ್ಲಿ ನಡೆಸಲು ನಿರ್ಧರಿಸಲಾಯಿತು. ಕಾರ್ಯದರ್ಶಿ ಪ್ರದೀಪ್ ಸ್ವಾಗತಿಸಿದರು. ಬಾಲಕೃಷ್ಣ ಶೆಟ್ಟಿಗಾರ್ ವಂದಿಸಿದರು.