ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಶ್ರೀಮದ್ ಎಡನೀರು ಮಠದ ನೂತನ ಯತಿಗಳಾಗಿ ನಿಯುಕ್ತರಾಗಿರುವ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ತಮ್ಮ ಪೀಠಾರೋಹಣದ ಪೂರ್ವಭಾವಿಯಾಗಿ ಹಮ್ಮಿಕೊಂಡಿರುವ ವಿವಿಧ ಧಾರ್ಮಿಕ ಕ್ಷೇತ್ರಗಳ ಸಂದರ್ಶನದ ಭಾಗವಾಗಿ ಶುಕ್ರವಾರ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಶ್ರೀಗಂಗಾಧರೇಂದ್ರ ಸರಸ್ವತಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.